January 22, 2025

National Sports Day Celebration

ರಾಷ್ಟ್ರೀಯ ಕ್ರೀಡಾ ದಿನ ಆಚರಣೆ

ಅಗಸ್ಟ್ 29 ರಂದು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಮೇಜರ ಧ್ಯಾನಚಂದರ ಹೆಸರಿನಲ್ಲಿ ಅವರ ಕ್ರೀಡಾ ಸಾಧನೆ ಇತರರಿಗೆ ಸ್ಪೂರ್ತಿದಾಯಕವಾಗಿರಬೇಕು ಎಂಬ ಸದಾಶಯದೊಂದಿಗೆ ಆಗಸ್ಟ 29 ರಂದು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತದೆ.
ಬಿ.ವಿ.ವಿ ಸಂಘದ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಾಕಿ ಮಾಂತ್ರಿಕ ಧ್ಯಾನಚಂದರ ಸ್ಮರಣಾರ್ಥ ಪುಷ್ಪನಮನ ಸಲ್ಲಿಸುವುದರೊಂದಿಗೆ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಶ್ರೀಮತಿ ಎಸ್. ಎಚ್. ಶೆಟ್ಟರ, ದೈಹಿಕ ನಿರ್ದೇಶಕರಾದ ಸದಾಶಿವ ಕೊಟ್ಟಾಳ, ಬೋಧಕ/ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.